ಮಿದುಳಿನ ಮಾಯಾ ಲೋಕ... ಐನ್ ಸ್ಟೈನ್ ನ ಮಿದುಳಿನ ಅಪಹರಣದ ರೋಚಕ ವೃತ್ತಾಂತ... ಸದ್ಯದಲ್ಲೇ ನಿರೀಕ್ಷಿಸಿ ಈ ನನ್ನ ಬ್ಲಾಗ್ ನಲ್ಲಿ !
ಅರ್ಧ ಶತಕ ಬಾರಿಸಿದ, ವಿಶ್ವವ್ಯಾಪಿ ಘನಾಕೃತಿಯ ವೃತ್ತಾಂತ -ಆಗಸ್ಟ್ 2025ರ ತುಷಾರ ದಲ್ಲಿ ಪ್ರಕಟವಾಗಿತ್ತು ನಿಂತಲ್ಲಿ, ಕೂತಲ್ಲಿ, ಎಲ್ಲೆಂದರಲ್ಲಿ ಕೈನಲ್ಲಿ ಮೊಬೈಲ್ ಹಿಡಿದುಕೊಂಡಿರುವ ಇಂದಿನ ಪೀಳಿಗೆಗೆ, ‘ಸರಿಸುಮಾರು ಐವತ್ತು ವರ್ಷಗಳ ಹಿಂದೆ ಕೆಲವರ ಎರಡೂ ಕೈಗಳಲ್ಲಿ ವಕ್ಕರಿಸಿದ್ದ ಒಂದು ಜಡ ಘನಾಕೃತಿ, ಇದೇ ರೀತಿ ಅವರ ಸಮಯವನ್ನು, ಸಂಯಮವನ್ನು ಕಸಿದುಕೊಳ್ಳುತ್ತಿತ್ತಾದರೂ ಅವರ ಮಿದುಳಿಗೆ ಕಸರತ್ತು ನೀಡುತ್ತಿತ್ತು ’- ಎಂದರೆ ಅಚ್ಚರಿಯಾಗಬಹುದು! ಆ ಕಾಲದಲ್ಲಿ ಅಂಥದೊಂದು ಗೀಳಿಗೆ ಕಾರಣವಾದ ಆ ಬಣ್ಣ ಬಣ್ಣದ ಕ್ಯೂಬ್ , ಹಂಗೇರಿ ದೇಶದ ಏರ್ನೋ ರೂಬಿಕ್ ( Ernő Rubik ) ಅನ್ನುವ ಶಿಲ್ಪಿ ಹಾಗೂ ವಾಸ್ತುಶಿಲ್ಪದ ಪ್ರೊಫೆಸರ್ ಒಬ್ಬನ ಕಲ್ಪನೆಯ ಕೂಸು. ಮ್ಯಾಜಿಕ್ ಕ್ಯೂಬ್, ಸ್ಪೀಡ್ ಕ್ಯೂಬ್, ಪಜ್ಲ್ ಕ್ಯೂಬ್, ಬರೀ ಕ್ಯೂಬ್ ಹೀಗೆ ಹಲವು ಹೆಸರುಗಳುಳ್ಳ ಈ ಕೌತುಕ, ಅದರ ಕರ್ತೃವಿನ ಕಲ್ಪನೆಯನ್ನೂ ಮೀರಿ ಜನಪ್ರಿಯವಾದದ್ದು, ಈ ಶತಮಾನದ ವಿಸ್ಮಯಗಳಲ್ಲಿ ಒಂದು. ಅಷ್ಟಕ್ಕೂ ಏರ್ನೋ ರೂಬಿಕ್ ಆವಿಷ್ಕರಿಸಿದ್ದು ಒಂದು ಒಗಟಿನಾಟಿಕೆಯನ್ನು ಅಲ್ಲವೇ ಅಲ್ಲ! ತನ್ನವಿದ್ಯಾರ್ಥಿಗಳಿಗೆ, ಮೂರು ಆಯಾಮಗಳುಳ್ಳ ಆಕೃತಿಗಳ ಕುರಿತು ವಿವರಣೆ ನೀಡಲು ಅವನಿಗೆ ಒಂದು ಸಲಕರಣೆ ಬೇಕಿತ್ತು. ಅವನು ಈ ಕ್ಯೂಬ್ ನ್ನು ಆವಿಷ್ಕರಿಸಲು ಕಾರಣ ಇದುವೇ ಎಂಬ ಮಾತು ಜನಜನಿತವಾಗಿದೆ. ಆದರೆ ಅದು ಹಾ...
Comments
Post a Comment