ಒಂದು ಅಜ್ಜಿ ಕಥೆ “ ಬಡಗಿ ಬೇಸಾಯ ಕರ್ಮಿಗರೇನು ಯೋಗಿಗಳೊ ? ಮುಡುಪವರ ಮನಸೆಲ್ಲ ಕೈಯ ದುಡಿತಕ್ಕೆ ಬಿಡುವಿರದು ಬಣಗು ಚಿಂತೆಗೆ , ಬುತ್ತಿ ಹಂಗಿರದು ಕಡಿದಲ್ಲವರ್ಗೆ ಬಾಳ್ ” - ಮಂಕು ತಿಮ್ಮ ಬಸವನ ಗುಡಿಯ ‘ ಮಂಕು ತಿಮ್ಮ ’ ನ ( ಡಿವಿಜಿ ) ರಸ್ತೆಯ ಹೋಟೆಲ್ ಒಂದರಿಂದ ತಿಂಡಿ ಕಟ್ಟಿಸಿಕೊಂಡು ರಸ್ತೆಗಿಳಿದಾಗ ಸಮಯ ರಾತ್ರಿ ಸುಮಾರು ಎಂಟೂವರೆ ಗಂಟೆ . ಕೆಲವು ಅಂಗಡಿಗಳು ಕದವಿಕ್ಕುವ ಸಮಯವದು . ಸಂಬಳದಾರರು , ದಿನಕೂಲಿಗೆ ದುಡಿಯುವವರು , ‘ ಟೈಮ್ ಪಾಸ್ ಮಾಡುವುದು ಹೇಗೆ ?’ ಎಂಬ ಗುರುತರ ಸಮಸ್ಯೆಯಲ್ಲಿ ಸಿಲುಕಿದವರು , ಎಂತೆಂತವರು ರಸ್ತೆಗೆ ಇಳಿದಿದ್ದರೂ ತಮ್ಮತಮ್ಮ ಮನೆಗ ಳ ತ್ತ À ಮುಖಮಾಡುವ ಹೊತ್ತು . ‘ ತಡ ಮಾಡಬಾರದು ’ ಎಂದು ಲಗುಬಗೆಯಿಂದ ಹೊರಟ ನನ್ನನ್ನು , ಮೊದಲೇ ನನ್ನ ಕಣ್ಣಿಗೆ ಬಿದ್ದಿತ್ತಾದರೂ ನಾನು ಕಡೆಗಣಿಸಿದ , ಆದರೆ ಸುಪ್ತಮನದಲ್ಲಿ ಉಳಿದುಕೊಂಡ ಒಂದು ಸ್ತಬ್ಧ ಚಿತ್ರ , ಪ್ರಜ್ಞೆಯನ್ನು ಪ್ರವೇಶಿಸಿ ಕಾಡಲಾರಂಭಿಸಿತು . ಹೆಜ್ಜೆಗಳು ನಿಧಾನವಾದವು . ಆ ಹೋಟೆಲ್ ನ ಹೊರಗಡೆ ರಸ್ತೆಯ ಬದಿಯಲ್ಲಿ ಒಂದು ಜೀವ , ಸಮಯದ ಗೊಡವೆಯೇ ಇಲ್ಲದೆ ಹೂವ ಮಾರಾಟ ಮಾಡುತ್ತಿತ್ತು . ಆಕೆ ಸುಮಾರು ಎಂಭತ್ತರ ಆಸುಪಾಸಿನ ತರುಣಿ . ಕೂಲಿಂಗ್ ಗ್ಲಾಸ್ ಬೇರೆ ಧರಿಸಿದ್ದಾಳೆ . ಆ ಹೊತ್ತಲ್ಲಿ , ಇಳಿವಯಸ್ಸಿನಲ...
I write therefore I am. It is no holds barred. World is the page I crawl on. At the end of the day I want the readers to wonder 'what is in store for us next?' If in the due course I succeed in discovering myself, I would feel gratified.